ರೂಪಾಂತರಿ ಓಮಿಕ್ರಾನ್ ಭೀತಿ ಹಿನ್ನೆಲೆ, ವಿದೇಶಗಳಿಂದ ಬರುವವರ ಮೇಲೆ ಬಿಬಿಎಂಪಿ ಹೆಚ್ಚಿನ ನಿಗಾ ವಹಿಸಲು ಮುಂದಾಗಿದೆ. ಕೊರೋನಾ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ಕೊಟ್ಟಿದ್ದು, ಹೀಗಾಗಿ ಬಿಬಿಎಂಪಿ ಫುಲ್ ಅಲರ್ಟ್ ಆಗಿದೆ. ರಾಜ್ಯದಲ್ಲಿ 19 ಓಮಿಕ್ರಾನ್ ಪ್ರಕರಣಗಳು ಬೆಳಕಿಗೆ ಬಂದಿದ್ದು,
ಈ ಪೈಕಿ 10 ಪ್ರಕರಣ ಬೆಂಗಳೂರಿನಲ್ಲೇ ಪತ್ತೆಯಾಗಿದೆ. ಹೀಗಾಗಿ ಅಕಸ್ಮಾತ್ ಮೂರನೇ ಅಲೆ ಬಂದರೂ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುವ ಲೆಕ್ಕಾಚಾರ ಹಾಕಿಕೊಳ್ಳಲಾಗಿದೆ. ಹೀಗಾಗಿ ಈಗಿಂದೀಗಲೇ ಬೆಂಗಳೂರಿನಲ್ಲಿ ಬೇಕಾದ ಸಿದ್ಧತೆಗಳನ್ನು ನಡೆಸಲು ಪಾಲಿಕೆ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಟ್ಟಿದೆ ಎಂದು ಹೇಳಲಾಗಿದೆ.
