ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಒಮಿಕ್ರಾನ್ 5 ಪಟ್ಟು ವೇಗವಾಗಿ ಹರಡುತ್ತದೆ ಅಂತ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊರೊನಾ ವಾರ್ ರೂಂಗಳನ್ನ ಸಕ್ರಿಯಗೊಳಿಸಿ ಅಂತ,
ರಾಷ್ಟ್ರೀಯ ಆರೋಗ್ಯಾಧಿಕಾರಿ ರಾಜೇಶ್ ಭೂಷಣ್ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಜಿಲ್ಲಾ ಹಾಗೂ ಸ್ಥಳೀಯ ಮಟ್ಟದಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿರುವ ರಾಜೇಶ್ ಭೂಷಣ್, ಟೆಸ್ಟಿಂಗ್ ಹಾಗೂ ಬೆಡ್ ವ್ಯವಸ್ಥೆ ಹೆಚ್ಚಿಸಲು ತಿಳಿಸಿದ್ದಾರೆ. ಟೆಸ್ಟಿಂಗ್ನಲ್ಲಿ ಕಳೆದ ವಾರಕ್ಕಿಂತ ಶೇ.10 ರಷ್ಟು ಹೆಚ್ಚಿಸಲು ಸೂಚಿಸಿದ್ದಾರೆ.
