ಬೆಂಗಳೂರು: ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಕೇಸ್ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನರಲ್ಲಿ ಭೀತಿ ಶುರುವಾಗಿದೆ. ಈ ಹಿಂದೆ ಎರಡನೇ ಅಲೆಯಲ್ಲಿ ಕೊರೊನಾದಿಂದ ಸಾಕಷ್ಟು ಜನರು ಸಾವನ್ನಪ್ಪಿದ್ದರು. ಇದೇ ಕಾರಣದಿಂದ ಮುಂಜಾಗ್ರತೆಯಿಂದ ಜನರು ಆಸ್ಪತ್ರೆಗೆ ಆಗಮಿಸಿ, ತಪಾಸಣೆ ಮಾಡಿಕೊಳ್ಳುತ್ತಿದ್ದಾರೆ. ಶೇ 15 ರಿಂದ 20ರಷ್ಟು ಜನರು ಸಾಮಾನ್ಯ ಜ್ವರ, ಸಣ್ಣ ಪುಟ್ಟ ರೋಗ ಲಕ್ಷಣಗಳಿದ್ದರೂ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಸಕ್ರಿಯ ಪ್ರಕರಣಗಳ ಜೊತೆ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಏರಿಕೆಯಾಗಿದೆ ಎಂದು ಹೇಳಲಾಗಿದೆ.
