ದೇಶದಲ್ಲಿ ಓಮಿಕ್ರಾನ್ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 75 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 653ಕ್ಕೆ ಏರಿಕೆಯಾಗಿದೆ. ಸಂತ್ರಸ್ತರಲ್ಲಿ 186 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಂಗಳವಾರ ಬುಲೆಟಿನ್‌ನಲ್ಲಿ ತಿಳಿಸಿದೆ. 167 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.165 ಪ್ರಕರಣಗಳೊಂದಿಗೆ ದೆಹಲಿ ಎರಡನೇ ಸ್ಥಾನದಲ್ಲಿದೆ.
