ದಾವಣಗೆರೆ:- ಟ್ರ್ಯಾಕ್ಟರ್ಗೆ ಮಾರುತಿ ಓಮಿನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಜರುಗಿದೆ.
64 ವರ್ಷದ ರುದ್ರೇಶಪ್ಪ, 62 ವರ್ಷದ ಮಲ್ಲಿಕಾರ್ಜುನ್ ಹಾಗೂ 80 ವರ್ಷದ ಗಂಗಮ್ಮ ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.