ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ.
ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ರು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ.
Friday Remedy: ಶುಕ್ರವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ.! ಬಡತನ ಕಾಡುತ್ತೆ
ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.