ನ್ಯೂಯಾರ್ಕ್ : ಬ್ರಾಂಕ್ಸ್ ಬರೋದಲ್ಲಿನ ಸುರಂಗಮಾರ್ಗದಲ್ಲಿ ಬಂದೂಕುಧಾರಿಯೊರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಇತರ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ.
ಘಟನೆಯಲ್ಲಿ 25 ವರ್ಷದ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರಲ್ಲಿ ಪುರುಷರು ಮಹಿಳೆಯರು ಸೇರಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಘಟನೆ ನಡೆಯಲು ಕಾರಣ ತಿಳಿದುಬಂದಿಲ್ಲ ಪೊಲೀಸರ ಮಾಹಿತಿ ಪ್ರಕಾರ ಇಬ್ಬರು ಬಂದೂಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)