ಬೆಂಗಳೂರು: ನಾಗಮಂಗಲದಲ್ಲಿ ಅಂಗಡಿ ಸುಟ್ಟವರು, ಚಪ್ಪಲಿ, ಕಲ್ಲು ಎಸೆದವರನ್ನು ಕೇಸಿನಲ್ಲಿ ಸೇರಿಸಿಲ್ಲ. ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ. ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ? ಇದು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಕಿಡಿಕಾರಿದ್ದಾರೆ.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣಪತಿ ಹಬ್ಬ ಮಾಡುವ, ಮೆರವಣಿಗೆ ಹೋಗುವ ಹಿಂದೂ ಯುವಕರ ಮೇಲೆ ನೂರಾರು ಕಲ್ಲು ಎಸೆದಿದ್ದಲ್ಲದೇ, ಗಣಪತಿ ಮೂರ್ತಿ ಮೇಲೆ ಚಪ್ಪಲಿ ಎಸೆದಿದ್ದಾರೆ. ಹಿಂದೂಗಳ ಮೇಲೆ ಲಾಠಿಚಾರ್ಜ್, ಕಲ್ಲೆಸೆತ ಆಗಿದೆ. ಹಿಂದೂಗಳ ಹತ್ತಾರು ಅಂಗಡಿ ಸುಟ್ಟಿದ್ದಾರೆ. ಆದರೆ ಹಿಂದೂಗಳನ್ನೇ ಪ್ರಮುಖ ಆರೋಪಿಗಳನ್ನಾಗಿ ಮಾಡಿ (ಎ1, ಎ2, ಎ3 ಹೀಗೆ) ಕೇಸು ಹಾಕಿದ್ದಾರೆ ಎಂದು ಆಕ್ಷೇಪಿಸಿದರು.