ಚಿತ್ರದುರ್ಗ: ದೇಶದ ಅಭಿವೃದ್ಧಿಗೆ ಜಾತಿಗಣತಿ ಪೂರಕವಾಗಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿಗಣತಿ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಚಿತ್ರದುರ್ಗದಲ್ಲಿ ಏ. 23ರಂದು ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಕಾನೂನಿನ ಚೌಕಟ್ಟಿನಲ್ಲೇ ಜಾತಿಗಣತಿ ನಡೆಸಿ, ಕಾನೂನಿನ ಪ್ರಕಾರವೇ ಜಾತಿಗಣತಿ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು. ಇದೇ ವೇಳೆ, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಎಸ್ಸಿ ಎಸ್ಟಿ ವರ್ಗಗಳಿಗೆ ವಿಶೇಷ ಬಜೆಟ್ ನೀಡಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಘೋಷಿಸಿದರು. ಸಂವಿಧಾನ ಬದಲಾವಣೆ ಮಾಡಿ 50%ಕ್ಕಿಂತಲೂ ಹೆಚ್ಚು ತಿದ್ದುಪಡಿ ಮಾಡಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಆಶ್ವಾಸನೆ ನೀಡಿದರು.
ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತಿದ್ದೀರಾ!?.. ಹಾಗಿದ್ರೆ ಈ ಸುದ್ದಿ ಓದಿ!
ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕೊಡಲಾಗುತ್ತದೆ ಎಂದು ತಿಳಿಸಿದ ಅವರು, ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದಾಗ ಜಿಎಸ್ಟಿ ರದ್ದುಗೊಳಿಸಲಾಗುವುದು. ಕೃಷಿಗಾಗಿ ಹೊಸ ನೀತಿ ಮಾಡಲಾಗುತ್ತದೆ. ರೈತರಿಗೆ ನೇರವಾಗಿ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ, ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು.