ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿಗೆ ಪಟಾಕಿ ಸಿಡಿಸಲು ಕೇವಲ 2 ಗಂಟೆ ಮಾತ್ರ ಅವಕಾಶ ನೀಡಲಾಲಾಗಿದೆ ಎಂದು ದಯಾನಂದ್ ಹೇಳಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಹಾಗೂ ಬಳಕೆಗೆ ಮಾತ್ರ ಅವಕಾಶವಿದೆ. ಈ ಬಗ್ಗೆ ನಿಗಾ ವಹಿಸಲು ಎಸಿಪಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.
‘ನಗರದಲ್ಲಿರುವ 62 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಸಿರು ಪಟಾಕಿ ಮಾರಲು ಅನುಮತಿ ಕೋರಿ 912 ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ, 263 ವ್ಯಾಪಾರಿಗಳಿಗೆ ಈಗಾಗಲೇ ಪರವಾನಗಿ ನೀಡಲಾಗಿದೆ’ ಎಂದು ಅವರು ತಿಳಿಸಿದರು.