ಬೆಂಗಳೂರು:- ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್ಗಳು ಮತ್ತು ಆ್ಯಂಬುಲೆನ್ಸ್ ಸೇರಿದಂತೆ ನಿರ್ಬಂಧಿತ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದರು.
ಸೂಕ್ಷ್ಮ ವನ್ಯಜೀವಿಗಳ ಆವಾಸ ಸ್ಥಾನವನ್ನು ರಕ್ಷಿಸಲು ಜಾರಿಯಲ್ಲಿರುವ ಕಟ್ಟುನಿಟ್ಟಾದ ರಾತ್ರಿ ಪ್ರಯಾಣ ನಿಷೇಧವನ್ನು ಈ ನಿರ್ಧಾರವು ಸ್ವಲ್ಪ ಸಡಿಲಗೊಳಿಸುತ್ತದೆ ಎಂದಿದ್ದರು. ಆದರೆ, ಇದೀಗ ಬಂಡೀಪುರದಲ್ಲಿ ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್ಗಳಿಗೆ ಮತ್ತು 1 ಆ್ಯಂಬುಲೆನ್ಸ್ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದರು.
ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರದ ಬಗ್ಗೆ ಮತ್ತೊಮ್ಮೆ ಚರ್ಚೆಗಳು ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಸೇವ್ ಬಂಡೀಪುರ’ ಎಂಬ ಅಭಿಯಾನ ಆರಂಭವಾಗಿದೆ. ಕರ್ನಾಟಕ ಸರ್ಕಾರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ 2 ಬಸ್ಗಳ ಸಂಚಾರಕ್ಕೆ ಅನುಮತಿ ನೀಡಿದೆ. ಈ ಕುರಿತು ವಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಆದ್ದರಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.