ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಹಿನ್ನೆಲೆ ಎಚ್ಚತ್ತ ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ಬಿಬಿಎಂಪಿ ಮನವಿ ಮಾಲಿನ್ಯ ರಹಿತ ದೀಪಾವಳಿಯನ್ನಾಗಿ ಆಚರಣೆ ಮಾಡಲು ಮನವಿ ಹಸಿರು ಪಟಾಕಿಗಷ್ಟೇ ಅನುಮತಿ ನೀಡಿದ ಸರ್ಕಾರ ನಿಯಮ ಮೀರಿದರೆ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು ಉತ್ತರ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಮಾಡಿದ್ರೆ ಒಳ್ಳೆಯದು: ಡಿ.ವಿ.ಸದಾನಂದಗೌಡ
ಪಟಾಕಿ ಮಾರುವ ಮಳಿಗೆಗೆ ಕೆಲವು ನಿಭಂದನೆಗಳನ್ನು ನೀಡಿದ ಸರ್ಕಾರ ಹಾಗಿದ್ರೆ ಪಟಾಕಿ ಮಾರಾಟ ಮಾಡುವ ಮಳಿಗೆಗಳ ನಿಬಂಧನೆಗಳು ಏನು? ಇಲ್ಲಿದೆ ನೋಡಿ!
ಹಾಗಿದ್ರೆ ಪಟಾಕಿ ಮಾರಾಟ ಮಾಡುವ ಮಳಿಗೆಗಳ ನಿಬಂಧನೆಗಳು ಏನು?
-ಹಸಿರು ಪಟಾಕಿ ಮಾರುವುದು ಕಡ್ಡಾಯ,
-ಹಸಿರು ಪ್ಯಾಕೆಟ್ಗಳ ಮೇಲೆ ಹಸಿರು ಪಟಾಕಿ ಚಿಕ್ಕ ಕ್ಯೂಆರ್ ಕೋಡ್ ಕಡ್ಡಾಯ
-ಮಳಿಗೆಗಳ ವಿಸ್ತೀರ್ಣ 10×10 ಅಡಿ ಸೀಮಿತ
-ನಿಗದಿಗಿಂತ ಹೆಚ್ಚು ಪ್ರಮಾಣದ ಪಟಾಕಿ ದಾಸ್ತಾನು ಮಾಡುವಂತಿಲ್ಲ
-ಸಾಧ್ಯವಾದಷ್ಟೂ ಬೆಂಕಿ ತಡೆಯುವ ಉಪಕರಣಗಳನ್ನೇ ಬಳಸಿ ಮಳಿಗೆ ನಿರ್ಮಿಸಬೇಕು
-ಮಳಿಗೆ ಮುಂಭಾಗ ಹಾಗೂ ಹಿಂಭಾಗ ಪ್ರವೇಶಿಸುವ ಅವಕಾಶ ಇರಬೇಕು
-ಪ್ರತಿ ಮಾರಾಟ ಮಳಿಗೆಗೆ 3 ಮೀಟರ್ ಅಂತರ ಕಡ್ಡಾಯ
-ಪರವಾನಗಿ ಪತ್ರ ಮಳಿಗೆಯಲ್ಲಿ ಪ್ರದರ್ಶಿಸಬೇಕು
-ಪರವಾನಗಿದಾರರು ಮಳಿಗೆಯಲ್ಲಿ ಕಡ್ಡಾಯವಾಗಿ ಇರಬೇಕು.
-ಪ್ರತಿ ಮಾರಾಟ ಮಳಿಗೆ ಯಲ್ಲಿ ಅಗ್ನಿಶಮನ ವ್ಯವಸ್ಥೆ ಇರಬೇಕು.
-ಮಳಿಗೆ ಸಮೀಪ ಧೂಮಪಾನಕ್ಕೆ ಅವಕಾಶವಿಲ್ಲ.
-ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ
-ರಾತ್ರಿ ವೇಳೆ ಯಾರೂ ಮಳಿಗೆಯಲ್ಲಿ ಮಲಗದಂತೆ ಎಚ್ಚರ ವಹಿಸಬೇಕು
-ಎಲೆಕ್ಟಿಕಲ್ ವೈರಿಂಗ್ ಮತ್ತು ಫಿಟ್ಟಿಂಗ್ಸ್ ವ್ಯವಸ್ಥೆ ಮಾಡಿಕೊಂಡಿರಬೇಕು
-ಪರವಾನಗಿ ಪಡೆದಿರುವ ದಿನಾಂಕ, ಸ್ಥಳದಲ್ಲಿ ಮಾತ್ರವೇ ಮಾರಾಟಕ್ಕೆ ಅವಕಾಶ
-ವಿದೇಶಿ ತಯಾರಿಕ ಪಟಾಕಿ ಮಾರಾಟಕ್ಕೆ ನಿರ್ಬಂಧ
-ಪಟಾಕಿಯನ್ನು 18 ವರ್ಷದೊಳಗಿನ ಮಕ್ಕಳಿಗೆ ಮರಾಟ ಮಾಡುವಂತಿಲ್ಲ