ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಚಿತ್ರದುರ್ಗ, ತುಮಕೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಲಿದ್ದಾರೆ ಬಳಿಕ ಮಧ್ಯಾಹ್ನ 3.30ಕ್ಕೆ ಸಿರಿಗೆರೆ ಮಠಕ್ಕೆ ಭೇಟಿ ನೀಡಿ ಸಂಜೆ 5.30ಕ್ಕೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ಸೋಮಣ್ಣ ಭೇಟಿ ನೀಡಲಿದ್ದಾರೆ. ಡಿಸೆಂಬರ್ 6ರಂದು ಗುರುಭವನ ಲೋಕಾರ್ಪಣೆ ಸಮಾರಂಭ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ವಿ.ಸೋಮಣ್ಣ ಆಗಮಿಸುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಭೇಟಿ ನೀಡಲಿದ್ದಾರೆ. ಸಿದ್ದಲಿಂಗ ಶ್ರೀಗಳ ಅಶೀರ್ವಾದ ಪಡೆದು ಬಳಿಕ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಲಿದ್ದಾರೆ.