ಗದಗ: ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪರಿಹಾರ ಸಿಗದೆ ಇರುವ ಹಿನ್ನೆಲೆಯಲ್ಲಿ ಕೇಂದ್ರದ ನಡೆಗೆ ಸಚಿವ ಸಂಪುಟದಲ್ಲಿ ಖಂಡನೆ ವ್ಯಕ್ತಪಡಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬರ ಪರಿಹಾರದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ವಿಸ್ತೃತ ವಾಗಿ ಚರ್ಚೆ ಮಾಡಿದ್ವಿ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೆವು.
ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತಪಡಿಸಿದ್ದೀವಿ ಎಂದರು. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರ ಗಳಲ್ಲಿ ಬರಗಾಲ ಪರಿಹಾರದ ಕೆಲಸಗಳು ಶುರುವಾಗಬೇಕು. ಈಗಾಗಲೇ 700-800 ಕೋಟಿ ಜಿಲ್ಲಾಧಿಕಾರಿ ಗಳ ಅಕೌಂಟ್ ನಲ್ಲಿದೆ. ಬರಗಾಲ ನಿರ್ವಹಣೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿಎಂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದರು.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಹಣಕಾಸು ರಿಲೀಸ್ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷಗಳು ಒತ್ತಾಯ ಮಾಡ್ತಿಲ್ಲ. ಆದರೆ ಬದಲಾಗಿ ಅನಾವಶ್ಯಕವಾಗಿ ಸಮಯ ಕಳೆಯಲು ಬಿಜೆಪಿಯವರು ಪ್ರವಾಸ ಮಾಡ್ತಿದ್ದಾರೆ. ನೈಜವಾಗಿ ಎಂಪಿಗಳು ಬಳಿ ಕೇಂದ್ರದ ಬಳಿ ಒತ್ತಡ ತರಬೇಕು. ಪರಿಹಾರ ಬಿಡುಗಡೆ ಮಾಡೋದು ಕೇಂದ್ರ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.