ಬೆಂಗಳೂರು:- ವಿಪಕ್ಷಗಳು ಆಧಾರವಿಲ್ಲದೇ ಆರೋಪ ಮಾಡಬಾರದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತುಪಡಿಸಬೇಕು ಎಂದರು.
ಮ್ಯಾರೇಜ್ ಬ್ರೋಕರ್ ಧೋಖಾ: ಮದುವೆ ಆಗದ ಯುವಕರೇ ಎಚ್ಚರ; ಈ ಸುದ್ದಿ ಕೇಳಿದ್ದೀರಾ!?
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಿದ ಅವರು, ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.