ಬೆಂಗಳೂರು:- ಜಾತಿ ಜನಗಣತಿ ವರದಿ ಬಿಡುಗಡೆಗೆ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವರದಿ ಬಿಡುಗಡೆಗೆ ತುದಿಗಾಲಿನಲ್ಲಿ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಹೋದಲ್ಲಿ ಬಂದಲ್ಲಿ ಜಾತಿಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದಕ್ಕೆ ಲಿಂಗಾಯತ ಸಮುದಾಯ ಮಾತ್ರವಲ್ಲದೆ, ಒಕ್ಕಲಿಗ ಸಮುದಾಯವೂ ವಿರೋಧ ವ್ಯಕ್ತಪಡಿಸುತ್ತಿದೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಿರುವ ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಿ ಹಾಕಿದ್ದಾರೆ.
ಗೃಹಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ವರದಿ ಜಾರಿಗೆ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಆದರೆ, ವರದಿ ಬಿಡುಗಡೆಗೆ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿದೆ