ದೆಹಲಿ:ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದ್ದು ಅಂದಾಜು ಮೀರಿ ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಪಕ್ಷ ಸೋತಿದ್ದು ಪಕ್ಷದ ಹಿರಿಯ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಬೆನ್ನಲ್ಲಿಯೇ ಸೋಲಿನ ಪರಾಮರ್ಶೆ ಆರಂಭವಾಗಿದೆ. ಸ್ವತಃ ಕಾಂಗ್ರೆಸ್ನಲ್ಲಿಯೇ ಪಕ್ಷದ ಕೆಲವೊಂದು ನಿರ್ಧಾರಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ
ದೇಶದಲ್ಲಿ ಸನಾತನ ಧರ್ಮವನ್ನು ಸ್ವತಃ ಕಾಂಗ್ರೆಸ್ ವಿರೋಧಿಸಲು ನಿಂತಿದ್ದೇ ಈ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ ಖಾಸಗಿ ವಾಹಿನಿಯೊಂದಿಗೆ ಮಾತನಾಡುವ ವೇಳೆ,ಈ ಮಾತುಗಳನ್ನ ಹೇಳಿದ್ದಾರೆ. ಮಹಾತ್ಮಾ ಗಾಂಧಿ ತೋರಿಸಿಕೊಟ್ಟಿದ್ದ ದಾರಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷ, ಮಾರ್ಕ್ಸ್ ದಾರಿಯಲ್ಲಿ ಸಾಗಿದಾಗ ಇಂಥ ಫಲಿತಾಂಶಗಳು ಸಿಗುತ್ತವೆ ಎಂಧು ಆಚಾರ್ಯ ಪ್ರಮೋದ್ ಕಿಡಿ ಕಾರಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ನನ್ನನ್ನು ಸ್ಟಾರ್ ಕ್ಯಾಂಪೇನರ್ ಲಿಸ್ಟ್ನಲ್ಲಿ ಇರಿಸಿದ್ದಾಗ ಇಲ್ಲಿ ಸರ್ಕಾರ ರಚನೆ ಮಾಡಿದ್ದೆವು. ಆದರೆ, ಈ ಬಾರಿ ನಾನು ಈ ಪಟ್ಟಿಯಲ್ಲೇ ಇದ್ದಿರಲಿಲ್ಲ. ಇದರಿಂದಾಗಿ ಮೂರೂ ರಾಜ್ಯಗಳಲ್ಲಿ ಸೋಲು ಕಂಡಿದೆ. ಒಬ್ಬ ಸಂತನನ್ನು ಸ್ಟಾರ್ ಕ್ಯಾಂಪೇನರ್ ಮಾಡಿದ ಪಕ್ಷ ಕಾಂಗ್ರೆಸ್. ಆದರೆ, ಈ ಬಾರಿ ಕಾಂಗ್ರೆಸ್ ಆ ನಿರ್ಧಾರ ಮಾಡಿರಲಿಲ್ಲ. ಕಾಂಗ್ರೆಸ್ನಲ್ಲಿ ಕೆಲವೊಂದು ವ್ಯಕ್ತಿಗಳಿದ್ದಾರೆ. ಅವರಿಗೆ ರಾಮ ಹೆಸರನ್ನು ತೆಗೆದರೆ ಆಗೋದಿಲ್ಲ. ಸನಾತನ ಬಗ್ಗೆ ಮಾತನಾಡಬಾರದು ಅಂತಾರೆ. ಸನಾತನವನ್ನು ವಿರೋಧಿಸಿದವನ್ನು ದೊಡ್ಡ ನಾಯಕ ಎನ್ನುವಂತೆ ಬಿಂಬಿಸುತ್ತಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಶ್ರಮ ಜೀವಿ. ಚುನಾವಣೆಗಾಗಿ ಬಹಳ ಕಷ್ಟಪಟ್ಟಿದ್ದಾರೆ. ಆದರೆ, ಜನರ ಆಶೀರ್ವಾದ ಸಿಕ್ಕಿಲ್ಲವಷ್ಟೇ ಎಂದಿದ್ದಾರೆ.