ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ಕಾಣೆ ಆಗಿದೆ ಅನ್ನೋದೆಲ್ಲ ಸುಳ್ಳು ವಿರೋಧ ಪಕ್ಷವರು ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ ಅದು ಸರಿಯಲ್ಲ ಎಂದು ಹೇಳಿದ್ದರು.
ಬೆಂಗಳೂರಿನ ಐಟಿ ಕಚೇರಿಯಲ್ಲಿರುವ ಐಷಾರಾಮಿ ಕಾರುಗಳು ಹರಾಜು: ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಕಾರುಗಳು!
ಜಾತಿಗಣತಿ ವರದಿ ಗೊಂದಲವಾಗಿರೋ ವಿಚಾರವಾಗಿ ಮಾತನಾಡಿದ ಅವರು, ಆ ವರದಿಯನ್ನ ನಾವಿನ್ನು ಹೊರಗೆ ತಂದೆ ಇಲ್ಲ.ಆಯೋಗದವರು ವರದಿಯನ್ನ ಸರ್ಕಾರಕ್ಕೆ ಕೊಟ್ಟ ನಂತರ ಸರ್ಕಾರ ಅದನ್ನ ತೀರ್ಮಾನ ಮಾಡುತ್ತದೆ ಎಂದರು.
ಮೂಲ ಪ್ರತಿ ಕಾಣೆ ಆಗಿದೆ ಅನ್ನೋದೆಲ್ಲ ಸುಳ್ಳು. ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ. ವರದಿನೇ ಆಚೆ ಬಂದಿಲ್ಲ, ವರದಿ ಆಚೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ. ವಿರೋಧ ಪಕ್ಷವರು ಕೂಡ ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ವರದಿ ಬಂದ ಮೇಲೆ ತಾನೇ ಅದೆಲ್ಲ ಮಾತನಾಡೋದು ಎಂದರು.