ಬೆಂಗಳೂರು:- ಕೇಂದ್ರದಲ್ಲಿ ಮತ್ತೆ ಬಿಜೆಪಿ ತರುವುದು ನಮ್ಮ ಗುರಿ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿ, ಕೇಂದ್ರದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕು. ಪ್ರತಿ ಕಾರ್ಯಕರ್ತನಿಗೂ ಅವರದೇ ಜವಾಬ್ದಾರಿ ಇರಲಿದೆ’ ಎಂದರು
ಪಕ್ಷದಲ್ಲಿ ಆಂತರಿಕವಾಗಿ ಹಲವು ಬಣಗಳಲ್ಲಿ ಹಂಚಿಹೋಗಿರುವ ಮುಖಂಡರನ್ನು ಒಗ್ಗೂಡಿಸುವ ಕೆಲಸ ಮಾಡಬೇಕಿದೆ. ಪಕ್ಷ ಬಿಡಲು ಯೋಚಿಸುತ್ತಿರುವ ಮುಖಂಡರನ್ನು ಪಕ್ಷದಲ್ಲೇ ಉಳಿಸುವ ಕೆಲಸ ಮಾಡುತ್ತೇನೆ’ ಎಂದರು.