ಕೋಲಾರ – ರಾಜ್ಯದ್ಯಂತ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವ ಗುರಿ ಹೊಂದಿದ್ದೇವೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರು ತಿಳಿಸಿದರು
ಇಂದು ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 12.5ಕೋಟಿಗಳ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲದರ್ಜೆಗೆರಿಸುವ ಹಾಗೂ 20 ಕೋಟಿಗಳ ವೆಚ್ಚದಲ್ಲಿ ಮುಳಬಾಗಿಲು ಹೆದ್ದಾರಿಯಲ್ಲಿ ನೂತನವಾಗಿ ಸ್ಥಾಪಿಸಲಾಗುತ್ತಿರುವ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಇಂದು ಒಟ್ಟಾರೆ ಸುಮಾರು 32.5 ಕೋಟಿಗಳ ವೆಚ್ಚದಲ್ಲಿ ಮುಳಬಾಗಿಲು ತಾಲ್ಲೂಕಿನ ಆಸ್ಪತ್ರೆಗಳನ್ನು ಮೇಲದರ್ಜೆಗೆರಿಸುವುದು ಹಾಗೂ ನೂತನವಾಗಿ50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಲು ಉದ್ದೇಶಿಸಲಾಗಿದೆ.
ಈ ಭಾಗದಲ್ಲಿ ಹೆರಿಗೆ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು ಸುಸಜ್ಜಿತ ಆಸ್ಪತ್ರೆಯ ಅಗತ್ಯವಿದೆ ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಆಗ ಮಾತ್ರ ಸ್ಥಳೀಯ ಶಾಸಕರ ಶ್ರಮ ಸಾರ್ಥಕತೆ ಪಡೆಯುತ್ತದೆ ಎಂದರು.