ಹಾಸನ: ನಾನು ಕೇಂದ್ರ ಮಂತ್ರಿ ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಾಧ್ಯಮಗಳ ಜತೆ ಮಾತನಾಡಿದರು.
ನಾನು ಇವುಗಳ ಯಾವುದರ ಬಗ್ಗೆ ಚಿಂತೆ ಮಾಡಿಲ್ಲ. 28 ಕ್ಷೇತ್ರಗಳನ್ನು ಗೆಲ್ಲುವುದಷ್ಟೆ ನಮ್ಮ ಮೈತ್ರಿಕೂಟದ ಗುರಿ. ನನ್ನ ಮುಂದೆ ಇರುವ ಏಕೈಕ ಅಜೆಂಡಾ ಎಂದರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸೋದು ಎಂದು ಅವರು ಹೇಳಿದರು. ಮಂತ್ರಿಯಾಗಿ ಏನು ಮಾಡಲಿ? ನನಗೆ ಅ ಸುದ್ದಿಯೇ ಗೊತ್ತಿಲ್ಲ.
ಇದಕ್ಕಿಂತ ಒಳ್ಳೆ ಸೇವಿಂಗ್ಸ್ ಮತ್ತೊಂದಿಲ್ಲ..! ದಿನಕ್ಕೆ 50 ರೂಪಾಯಿ ಉಳಿಸಿ 30 ಲಕ್ಷ ನಿಮ್ಮದಾಗಿಸಿಕೊಳ್ಳಿ.!
ಮಾಧ್ಯಮಗಳಲ್ಲಿ ಈ ಸುದ್ದಿಯನ್ನು ಗಮನಿಸಿದ್ದೇನೆ. ನನಗೆ ಅ ಬಗ್ಗೆ ಆಸೆಯೂ ಇಲ್ಲ. ಅ ರೀತಿ ಚರ್ಚೆಯೇ ಆಗಿಲ್ಲ ಎಂದ ಅವರು; ಮುಂದಿನ ಫೆಬ್ರವರಿ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಆದರೆ ಏನು ಮಾಡುವುದು? ಕೇಂದ್ರ ಮಂತ್ರಿ ಆಗುವ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ ಎಂದರು.