ಬೆಂಗಳೂರು:- ಕಡಲೆಕಾಯಿ ಪರಿಷೆ ನಮ್ಮ ನೆಲದ ಸಂಸ್ಕೃತಿ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಹಳ ಹಿಂದಿನಿಂದಲೂ ಕಡಲೆಕಾಯಿ ಪರಿಷೆ ವಿಜೃಂಭಣೆಯಿಂದ ನಡೆದುಕೊಂಡು ಬಂದಿದೆ. ಈ ರೀತಿಯ ಆಚರಣೆಗಳಿಂದಾಗಿ ನಮ್ಮ ನೆಲದ ಸಂಸ್ಕೃತಿ ಇಂದಿಗೂ ಜೀವಂತವಾಗಿದೆ. ಹೀಗಾಗಿ, ಈ ವರ್ಷವೂ ಲಕ್ಷಾಂತರ ಜನರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗ್ತಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಥಳೀಯ ವ್ಯಾಪಾರಿಗಳಿಗೆ ಆರ್ಥಿಕತೆ ಉತ್ತೇಜನ ನೀಡುವಲ್ಲಿ ಮುಂದಾಗಿದ್ದಾರೆ. ಹೀಗಾಗಿ, ಕಡಲೆಕಾಯಿ ಪರಿಷೆ ಸಾಕಷ್ಟು ಸಣ್ಣಪುಟ್ಟ ವ್ಯಾಪಾರಿಗಳಿಗೆ ಬಹಳಷ್ಟು ಆದಾಯ ತಂದುಕೊಡಲಿದೆ. ಈ ಬಾರಿ ಪರಿಷೆಯಲ್ಲಿ ಕೋಟ್ಯಾಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯುವ ನಿರೀಕ್ಷೆಯಿದೆ. ಎಲ್ಲರೂ ತಮ್ಮ ಕುಟುಂಬ ಸಮೇತರಾಗಿ ಕಡೆಲೆಕಾಯಿ ಪರಿಷೆಗೆ ಬಂದು ಸಂಭ್ರಮಿಸಿ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ