ಬೆಂಗಳೂರು: ಶಕ್ತಿ ಯೋಜನೆಯಿಂದ ಮೆಟ್ರೋ ರೈಲು ಸಂಸ್ಥೆಗಳಿಗೆ ಕುತ್ತು ಎಂಬ ಪ್ರಧಾನ ಮಂತ್ರಿಗಳಾದ ಮೋದಿಯವರ ಹೇಳಿಕೆ ಅವೈಜ್ಞಾನಿಕ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಇತ್ತೀಚೆಗೆ ಪ್ರಧಾನಮಂತ್ರಿಗಳು ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದು ಸರಿಯಲ್ಲ ಇದರಿಂದ ಮೆಟ್ರೋ ಕುತ್ತು ಬರುತ್ತದೆ ಎಂಬುದಾಗಿ ಹೇಳಿಕೆ ನೀಡಿದ್ದರು.
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವರು, ” ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು. ಕಳೆದ ಒಂದು ವರ್ಷದಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಶೇ.30 ಏರಿಕೆ ಕಂಡಿದೆ. ಜನವರಿ 2023 ರಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆ 1.65 ಕೋಟಿ, ಆದಾಯ 39.15 ಕೋಟಿಯಾಗಿತ್ತು, ಅದೇ ಏಪ್ರಿಲ್ 2024 ರಲ್ಲಿ ಪ್ರಯಾಣಿಕರ ಸಂಖ್ಯೆ 2 ಕೋಟಿಗೆ ಏರಿಕೆಯಾಗಿದ್ದು, ಆದಾಯ ರೂ. 51.71 ಕೋಟಿಗೆ ಏರಿಕೆಯಾಗಿದೆ ” ಎಂದು ಅಂಕಿ ಅಂಶ ಸಮೇತ ವಿವರಿಸಿದ್ದಾರೆ.