ಬೆಂಗಳೂರು: ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಈ ಹಿಂದೆ ಕಾಂಗ್ರೆಸ್ ಈ ಕಾರ್ಯಕ್ಕೆ ಮುಂದಾದಾಗ ಜನರು ಪ್ರತಿಭಟಿಸಿದ್ದರು. ಈಗ ಮತ್ತೆ ಈ ಕಾರ್ಯಕ್ಕೆ ಮುಂದಾಗಿದ್ದು, ಜನರು ಪ್ರತಿಭಟನೆ ಮಾಡಿದ್ದಾರೆ. ಇದರಲ್ಲಿ 200 ಕೋಟಿ ರೂ. ಗೂ ಅಧಿಕ ಕಿಕ್ಬ್ಯಾಕ್ ಇದೆ. ಇದು ಸುಮಾರು 3,000 ಕೋಟಿ ರೂ. ಮೌಲ್ಯದ ಆಸ್ತಿಗಳಾಗಿವೆ ಎಂದು ಹೇಳಿದರು.