ಗದಗ:- ಮೂರ್ನಾಲ್ಕು ದಿವಸಗಳಿಂದ ಪಹಣಿ ಪತ್ರ ವಿತರಣೆಯಾಗದ ಹಿನ್ನೆಲೆ, ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ ಘಟನೆ ಶಿರಹಟ್ಟಿ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಜರುಗಿದೆ.
ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಅಂತ ಆರೋಪ ಮಾಡಿದ್ದಾರೆ. ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಸ್ಥಳದಲ್ಲಿ ಇರುವದಿಲ್ಲ. ದಿನನಿತ್ಯ ಕೆಲಸ ಕಾರ್ಯ ಬಿಟ್ಟು ಕಚೇರಿಗೆ ಅಲೆದಾಟ ನಡೆಸುವದಾಗಿದೆ. ತಾಂತ್ರಿಕ ಸಮಸ್ಯೆ ಇದೆ ಎಂದು ಹೇಳಿ ಅಧಿಕಾರಿವರ್ಗ ಜಾರಿಗೊಳ್ಳುತ್ತಿದೆ ಎಂದು ಅಧಿಕಾರಿಗಳನ್ನ ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.