ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಮುಕ್ತಾಯವಾಗಿದೆ. ಗುರುವಾರ ಸಂಜೆ ಮತದಾನ ಮುಕ್ತಾಯವಾಗಿದ್ದು ಇದೀಗ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಶೆಹಬಾಜ್ ಷರೀಫ್ ಲಾಹೋರ್ನಲ್ಲಿ ರಾಷ್ಟ್ರೀಯ ಮತ್ತು ಪ್ರಾಂತೀಯ ಅಸೆಂಬ್ಲಿ ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ಸುದ್ದಿ ಕೇಳಿ ಬಂದಿದೆ.
ಉಗ್ರ ದಾಳಿಗಳು ಮತ್ತು ಚುನಾವಣಾ ದುಷ್ಕೃತ್ಯದ ಆರೋಪಗಳ ನಡುವೆ ಪಾಕಿಸ್ತಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ಸಂಸತ್ತಿನ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. 266 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪಿಟಿಐ ನಿಷ್ಠಾವಂತರು ಇದುವರೆಗೆ ಸುಮಾರು 49 ಸ್ಥಾನಗಳನ್ನು ಗೆದ್ದಿದ್ದಾರೆ, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಗೆ 42 ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಗೆ 34 ಸ್ಥಾನಗಳನ್ನು ಗೆದ್ದಿದ್ದಾರೆ. ಅದೇ ವೇಳೆ ಪಾಕಿಸ್ತಾನ ಚುನಾವಣಾ ಆಯೋಗದ ವೆಬ್ಸೈಟ್ನ ಪ್ರಕಾರ ಗಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತರು ಆಗಿರುವ ಪಕ್ಷೇತರರು ಎಣಿಕೆಯಾದ 136 ಸ್ಥಾನಗಳಲ್ಲಿ 49 ಸ್ಥಾನಗಳಲ್ಲಿ ಗೆಲುವು ಸಂಭ್ರಮಿಸಿದ್ದಾರೆ.
ಚುನಾವಣಾ ಆಯೋಗವು ಘೋಷಿಸಿದ 122 ಸ್ಥಾನಗಳ ಪೈಕಿ ಖಾನ್ ಅವರ ಪಕ್ಷದ ಬೆಂಬಲಿತ ಅಭ್ಯರ್ಥಿಗಳು 49 ಸ್ಥಾನಗಳನ್ನು ಗೆದ್ದಿದ್ದಾರೆ. ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ ಪಕ್ಷ 39 ಸ್ಥಾನಗಳನ್ನು ಹೊಂದಿದ್ದರೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ 30 ಸ್ಥಾನಗಳನ್ನು ಪಡೆದಿದೆ.