ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮತದಾನಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣೆಗೆ ವಾರ ಇರುವಾಗ್ಲೆ ಅಲ್ಲಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿದ್ದು ಸಾಕಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 6.50 ಲಕ್ಷ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
100 ವಿದೇಶಿ ವೀಕ್ಷಕರು ಪಾಕಿಸ್ತಾನದ ಚುನಾವಣಾ ಪ್ರಕ್ರಿಯೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.
ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, 12.85 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ 5121 ಅಭ್ಯರ್ಥಿಗಳಲ್ಲಿ ಒಟ್ಟು 12,85,85,760 ನೋಂದಾಯಿತ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಇವರಲ್ಲಿ 4,807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ಟ್ರಾನ್ಸ್-ಜೆಂಡರ್ ಅಭ್ಯರ್ಥಿಗಳು ಸೇರಿದ್ದಾರೆ. ನಾಲ್ಕು ಪ್ರಾಂತೀಯ ವಿಧಾನಸಭೆಗಳಿಗೆ 12,123 ಪುರುಷರು, 570 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳು ಸೇರಿದಂತೆ 12,695 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ಮತ್ತು ವಿದೇಶಿ ಪತ್ರಕರ್ತರು ಚುನಾವಣೆ ವರದಿ ಮಾಡಲು ದೇಶಕ್ಕೆ ಬಂದಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಸಿಕಂದನ್ ಸುಲ್ತಾನ್ ರಜಾ ತಿಳಿಸಿದ್ದಾರೆ.
ಇಮ್ರಾನ್ ಖಾನ್ ಜೈಲು ಪಾಲಾಗಿರುವುದರಿಂದ ಹಾಗೂ ಚುನಾವಣಾ ಚಿಹ್ನೆ ವಿವಾದದಿಂದಾಗಿ ಷರೀಫ್ ಗೆ ಸಂಪೂರ್ಣ ಲಾಭವಾಗಿದೆ. ಪಿಪಿಪಿಯ ಬಿಲಾವಲ್ ಭುಟ್ಟೋ ಪಂಜಾಬ್ನಲ್ಲಿ ಹೆಚ್ಚು ಪ್ರಭಾವ ಬೀರಿಲ್ಲ. ಹೀಗಾಗಿ ಷರೀಫ್ ಗೆದ್ದರೆ ನಾಲ್ಕನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ.