ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಬಳಿ ಹಳ್ಳಿಯೊಂದರಲ್ಲಿ ಇತ್ತೀಚೆಗೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾಪಡೆಗಳು ಹತ್ಯೆಗೈದ ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲಗಳ ಪ್ರಕಾರ, ಹತ್ಯೆಗೀಡಾದ ಇಬ್ಬರಲ್ಲಿ ಓರ್ವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ರಿಹಾನ್ ಎಂದು ಗುರುತಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕ್ ಕೈವಾಡವಿದೆ ಎಂದು ಶಂಕಿಸಲಾಗಿದೆ.
Virat Kohli Dating: ಅನುಷ್ಕಾ ಜೊತೆಗಿನ ಮದುವೆಗೂ ಮುನ್ನ 5 ಮಂದಿಯೊಂದಿಗೆ ಡೇಟಿಂಗ್ ಮಾಡಿದ್ದ ಕೊಹ್ಲಿ!
ಹತ್ಯೆಗೀಡಾದ ರಿಹಾನ್, ಉಪಗ್ರಹ ಸಂವಹನ ಸಾಧನ (ಸ್ಯಾಟಲೈಟ್ ಫೋನ್) ಹಾಗೂ ಅತ್ಯಾಧುನಿಕ M4 ರೈಫಲ್ ಅನ್ನು ಹೊತ್ತೊಯ್ಯುತ್ತಿದ್ದ. ಪಾಕಿಸ್ತಾನ ಸೇನೆ, ನೌಕಾಪಡೆ ಹಾಗೂ ವಾಯುಸೇನೆಗಾಗಿ ಈ ಮೈಕ್ರೋ ಸ್ಯಾಟಲೈಟ್ ಫೋನ್ ಅನ್ನು ಖರೀದಿಸಲಾಗಿತ್ತು ಎಂದು ಉನ್ನ ಮೂಲಗಳಿಂದ ತಿಳಿದುಬಂದಿದೆ.
ಈ ಉಗ್ರರ ಹತ್ಯೆ ನಡೆಯುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಭಯೋತ್ಪಾದಕ ದಾಳಿ ನಡೆದಿತ್ತು. ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್ ಕಮರಿಗೆ ಉರುಳಿ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಹತರಾಗಿದ್ದರು. ಇದಾದ ಬಳಿಕ ದೋಡಾ ಜಿಲ್ಲೆಯಲ್ಲಿ 4 ಭಯೋತ್ಪಾದಕ ದಾಳಿ ನಡೆದಿತ್ತು. ಉಗ್ರರು ಮತ್ತು ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಆರ್ಪಿಎಫ್ ಯೋಧ ಮತ್ತು ಇಬ್ಬರು ಭಯೋತ್ಪಾದಕರು ಸೇರಿ 11 ಮಂದಿ ಹತರಾಗಿದ್ದರು.