ಪೇಶಾವರ,ಪಾಕಿಸ್ತಾನ: ಗುಪ್ತಚರ ಮಾಹಿತಿ ಆಧರಿಸಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆ ನಡೆಸಿದ ಪಾಕಿಸ್ತಾನಿ ಭದ್ರತಾ ಪಡೆಗಳು 10 ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಮಿಲಿಟರಿಯ ಮಾಧ್ಯಮ ವಿಭಾಗ ತಿಳಿಸಿದೆ.
ಭಯೋತ್ಪಾದಕ ಚಟುವಟಿಕೆಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಬಾಗ್ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಹೇಳಿದೆ.
ಭಯೋತ್ಪಾದಕರ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸಿ, ಭದ್ರತಾ ಪಡೆಗಳು 10 ಜನರನ್ನು ಹತ್ಯೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ಉಳಿದಿರುವ ಯಾವುದೇ ಬೆದರಿಕೆಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ಮುಂದುವರಿದಿದೆ.
ಖೈಬರ್ ಪಖ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ನಡೆಸಿದ ಎರಡು ಪ್ರತ್ಯೇಕ ದಾಳಿಗಳ ನಂತರ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯ ಒಂದು ದಿನದ ಹಿಂದೆ ಭದ್ರತಾ ಪಡೆ ಏಳು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದರು. ಕಳೆದ ವಾರ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 30 ಭಯೋತ್ಪಾದಕರು ಮೃತಪಟ್ಟಿದ್ದರು.