ಇಂದು ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ 2024 ರ ಪ್ರಮುಖ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ.
SA V/s NED: ಡಚ್ಚರನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿದ ಆಫ್ರಿಕಾ..!
ಎಂದಿನಂತೆ ಈ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಎರಡೂ ತಂಡಗಳು ಈ ಪಂದ್ಯವನ್ನು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಲಿವೆ. ಟಿ20 ವಿಶ್ವಕಪ್ ನಲ್ಲಿ ಈಗಾಗಲೇ 6 ಬಾರಿ ಪಾಕಿಸ್ತಾನವನ್ನು ಮಣಿಸಿರುವ ಭಾರತ ತಂಡ ಏಳನೇ ಬಾರಿ ಈ ಸಾಧನೆ ಮಾಡಲು ಪ್ರಯತ್ನಿಸಲಿದೆ. ಆದಾಗ್ಯೂ, ಈ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ? ತಂಡದಲ್ಲಿ ಯಾವುದಾದರು ಬದಲಾವಣೆಗಳಲ್ಲಿವೆಯೇ? ಅದರಲ್ಲೂ ಮೊದಲ ಪಂದ್ಯದಲ್ಲಿ ಆರಂಭಿಕರಾಗಿ ವಿಫಲರಾಗಿದ್ದ ಕೊಹ್ಲಿ ಬದಲು ಜೈಸ್ವಾಲ್ ಓಪನಿಂಗ್ಗೆ ಮರಳುತ್ತಾರಾ? ಎಂಬ ಪ್ರಶ್ನೆಗಳು ಮೂಡಿವೆ.. ಇದಕ್ಕೆ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.
ಇಡೀ ವಿಶ್ವಕಪ್ಗಾಗಿ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಆರಂಭಿಕರನ್ನು ಈಗಾಗಲೇ ನಿಗದಿಪಡಿಸಲಾಗಿದೆ. ಆದರೆ ಇತರ ಸ್ಥಳಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಬದಲಾವಣೆಗಳನ್ನು ಮಾಡಲಾಗುತ್ತದೆ ಎಂದು ರೋಹಿತ್ ಸ್ಪಷ್ಟಪಡಿಸಿದ್ದಾರೆ. ಅಂದರೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಅಂದರೆ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲ್ಲಿದ್ದಾರೆ.
ಇನ್ನು ಬೌಲರ್ಗಳ ಬದಲಾವಣೆಯ ಬಗ್ಗೆ ಕೇಳಿದಕ್ಕೆ, ರೋಹಿತ್ ಏನನ್ನೂ ಹೇಳಲಿಲ್ಲ. ಆದರೆ ಹಿಂದಿನ ದಾಖಲೆಯನ್ನು ಪರಿಗಣಿಸಿ, ಟೀಂ ಇಂಡಿಯಾ ಈ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲಿಗೆ ಕುಲ್ದೀಪ್ ಯಾದವ್ಗೆ ಅವಕಾಶ ನೀಡಬಹುದು.