ಮಂಡ್ಯ: ನಿನ್ನೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ವೇಳೆ ಅವರ ಬೆಂಬಲಿಗರು ಪಾಕಿಸ್ತಾನ ಘೋಷಣೆ ಹಾಕಿದ್ದಾರೆ. ಇದನ್ನು ವಿರೋಧಿಸಿ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ನಗರದ ಬಂದೀಗೌಡ ಲೇಔಟ್ ನಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಸಿದ್ದಾರೆ. ಸದ್ಯ ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದ್ದು ಸ್ಥಳದಲ್ಲಿ ಗಲಾಟೆ ನಡೆಯುತ್ತಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರೆಲ್ಲರನ್ನು ವಶಕ್ಕೆ ಪಡೆದಿದ್ದು,
![Demo](https://ainlivenews.com/wp-content/uploads/2023/12/spoorthi-1.jpg)
ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟವಾಗಿದೆ. ಕಾಂಗ್ರೆಸ್ ಕಚೇರಿ ಒಳಗೆ ನುಗ್ಗದಂತೆ ಪೊಲೀಸರು ಮೊದಲೇ ಬ್ಯಾರಿಕೇಡ್ ಅಳವಡಿಸಿದ್ದರು. ಪ್ರತಿಭಟನಾಕಾರರಲ್ಲಿ ಬ್ಯಾರೀಕೇಡ್ ನಿಂದ ಒಳ ಬಂದ ಓರ್ವ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)