ದಾವಣಗೆರೆ: ದಾವಣಗೆರೆಯಲ್ಲಿ ಪಂಚಮಸಾಲಿ 2A ಮೀಸಲಾತಿ ಹೋರಾಟ ಆರಂಭಗೊಂಡಿದೆ. ದಾವಣಗೆರೆ ರಾಷ್ಟ್ರೀಯ 48 ರಲ್ಲಿ ಇಷ್ಟ ಲಿಂಗಪೂಜೆ ಪೂಜೆ ಮೂಲಕ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. 2A ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ 7ನೇ ಹಂತದ ಪ್ರತಿಭಟನೆಯಾಗಿದ್ದು,
ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅನುಪಸ್ಥಿತಿಯಲ್ಲಿ ಮನವಿ ಸ್ವೀಕರಿಸಿದರು. ಪಂಚಮಸಾಲಿ ಸಮಾಜದ ನೂರಾರು ಜನರು ಭಾಗಿಯಾಗಿದ್ದರು.