ಮಂಡ್ಯ:- ಮಂಡ್ಯ ಜಿಲ್ಲೆಯಲ್ಲಿ ಫೇಸ್ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ ಬಿದ್ದಿರುವ ಘಟನೆ ಜರುಗಿದೆ.
ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್ ಹಣ ಕಳೆದುಕೊಂಡಿದ್ದು, ಇದೀಗ ಪೂಜಾರಪ್ಪ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಅಭಿನಯದ ಆಪರೇಷನ್ ಲಂಡನ್ ಕೆಫೆ ಚಿತ್ರದ ಟೀಸರ್ ಬ್ಯಾಂಗ್ !
ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್, ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದು, ಇವರಿಗೆ ಕೆಲ ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿ ಪರಿಚಯವಾಗಿದ್ದಾಳೆ. ಹೀಗಾಗಿ ಆಕೆ ಜತೆ ಪ್ರತಿ ದಿನ ವಿಜಯ್ ಕುಮಾರ್ ಚಾಟಿಂಗ್ ಮಾಡುತ್ತಿದ್ದರು.ವಿಜಯ್ ಕುಮಾರ್ ಬಗ್ಗೆ ತಿಳಿದುಕೊಂಡ ಯುವತಿ, ವಸತಿ, ಆರೋಗ್ಯ ಸಮಸ್ಯೆ ಅಂತ ಹೇಳಿ ಹಂತ ಹಂತವಾಗಿ ಹಣ ಪೀಕಿದ್ದಾಳೆ. ಹೀಗೆ ಸುಮಾರು 1 ಲಕ್ಷದ 40 ಸಾವಿರದಷ್ಟು ಹಣವನ್ನು ಲಪಟಾಯಿಸಿದ್ದಾಳೆ.
ಬಣ್ಣ ಬಣ್ಣದ ಮಾತುಗಳಿಂದ ವಿಜಯ್ ಕುಮಾರ್ಗೆ ಬಲೆ ಹಾಕಿದ ಸುಂದರಿ ಮಾತು ನಂಬಿ ಫೋನ್ ಪೇ ಮೂಲಕ ವಿಜಯ್ ಹಣ ಕಳುಹಿಸಿದ್ದರು. ಹಣ ಕೊಟ್ಟ ಬಳಿಕ ಭೇಟಿ ಆಗುವಂತೆ ಸುಂದರಿಗೆ ವಿಜಯ್ ಒತ್ತಡ ಹೇರಲಾರಂಭಿಸಿದ್ದಾರೆ. ಆದರೆ, ಇಂದು, ನಾಳೆ ಎಂದು ಫೇಸ್ಬುಕ್ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ. ಸುಂದರಿ ಮಾಯವಾದ ಬಳಿಕ ತಾನು ಮೋಸ ಹೋಗಿರುವ ಬಗ್ಗೆ ವಿಜಯ್ ಕುಮಾರ್ಗೆ ಮನವರಿಕೆಯಾಗಿದ್ದು, ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ.