ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಲ್ಲರೂ ಒಂದೇ ಕಡೆ ಇರುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಕೆಲವರನ್ನು ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲರು ಒಂದೇ ಜೈಲಿನಲ್ಲಿ ಇರುವುದು ಸೂಕ್ತವಲ್ಲ ಎಂಬ ಕಾರಣದಿಂದ ಬಂಧಿಖಾನೆ ಅಧಿಕಾರಿಗಳು ಮತ್ತು ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ತುಮಕೂರು ಜೈಲಿಗೆ ಸ್ಥಳಾಂತರಿಸಿದ್ದಾರೆ ಎಂದರು.
ಇನ್ನು ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಜಿ.ಪರಮೇಶ್ವರ ಅವರು ತಿಳಿಸಿದರು. ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ ಎಂದು ಹೇಳಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರದ ಕುರಿತು ಮಾತನಾಡಿ, ಎಲ್ಲರು ಒಂದೇ ಜೈಲಿನಲ್ಲಿ ಇರುವುದು ಸೂಕ್ತವಲ್ಲ ಎಂಬ ಕಾರಣದಿಂದ ಬಂಧಿಖಾನೆ ಅಧಿಕಾರಿಗಳು ಮತ್ತು ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ತುಮಕೂರು ಜೈಲಿಗೆ ಸ್ಥಳಾಂತರಿಸಿದ್ದಾರೆ ಎಂದರು.