ತುಮಕೂರು:- ಆಜಾನ್ ಸದ್ದು ಕೇಳಿಸುತ್ತಿದ್ದಂತೆ ಗೃಹ ಸಚಿವ ಪರಮೇಶ್ವರ್ ಅವರು ಮಾತು ನಿಲ್ಲಿಸಿದ್ದಾರೆ.
ತುಮಕೂರಿನ ಚಿಲುಮೆ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿತ್ತು. ಸ್ವತ್ತು ಕಳವು ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಸ್ವತ್ತುಗಳ ಪ್ರದರ್ಶನ ಹಾಗೂ ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ನಡೆಯುತ್ತಿತ್ತು.
ಕಾರ್ಯಕ್ರಮದ ಬಳಿಕ ಸಚಿವ ಡಾ.ಜಿ.ಪರಮೇಶ್ವರ್ ನಡೆಸುತ್ತಿದ್ದರು. ಈ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಸದ್ದು ಕೇಳುತ್ತಿದ್ದಂತೆ ಪರಮೇಶ್ವರ ಅವರು ಸೈಲೆಂಟ್ ಆಗಿದ್ದಾರೆ. ಸುಮಾರು ಎರಡು ನಿಮಿಷಕ್ಕೂ ಹೆಚ್ಚು ಕಾಲ ಮಾತು ನಿಲ್ಲಿಸಿ ಪರಮೇಶ್ವರ್ ಸುಮ್ಮನೇ ಕುಳಿತರು.
ಆಜಾನ್ ಬಳಿಕ ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದಾರೆ.