ರಾಯಚೂರು: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ
ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಈಕೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು. ಕೊನೆಗೆ ಮನನೊಂದು ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.