ಪ್ಯಾರಿಸ್: ಒಲಿಂಪಿಕ್ಸ್ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ (Manu Bhaker) ಮತ್ತು ಸರಬ್ಜೋತ್ ಸಿಂಗ್ (Sarabjot Singh) ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ (Olympics Games) ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
https://ainlivenews.com/shock-for-lakshya-who-won-the-first-match-in-olympics-why-was-the-match-deleted-even-after-winning/
ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2 ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.
ಸೋಮವಾರ ಫ್ರಾನ್ಸ್ನ ಚಟೌರೌಕ್ಸ್ನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಮೂರನೇ ಸ್ಥಾನಗಳಿಸಿ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆಗಿಟ್ಟಿಸಿಕೊಂಡಿದ್ದರು. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ಒಟ್ಟು 580 ಅಂಕಗಳನ್ನು ಕಲೆಹಾಕಿದ್ದರು.