ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ ನಡುವೆ ವಿಶ್ವಕಪ್ ಕ್ರಿಕೆಟ್ ಪಂದ್ಯ ನಡೆಯಲಿದೆ.
ಈ ಕುರಿತು ಕೇಂದ್ರ ವಿಭಾಗ ಡಿಸಿಪಿ ಶೇಖರ್ ಪ್ರತಿಕ್ರಿಯಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಗೂಡ್ಸ್ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ತಿಳಿದ್ದಾರೆ. ಕ್ಯಾಬ್ಗಳಿಗೆ ಪಿಕ್ ಅಪ್ ಆ್ಯಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದ್ದು, ಸಾರ್ವಜನಿಕರು ನಾಳೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಾಧ್ಯವಾದಷ್ಟು ಪ್ರಯಾಣ ಕಡಿಮೆ ಮಾಡಿದರೆ ಉತ್ತಮ ಎಂದು ತಿಳಿಸಿದ್ದಾರೆ.
ಇನ್ನು, ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.