ಬೆಳಗಾವಿ: ನಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯ ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಬಣಗಳು ಇಲ್ಲ. ಪ್ರತಿಷ್ಠೆ ಇದೆ.
ಬಿಜೆಪಿಯಲ್ಲಿ ಪ್ರತಿಷ್ಠೆ ಹಾಗೂ ಬಣ ಜೊತೆಗೆ ದೊಡ್ಡ ಬಿರುಕು ಮೂಡಿದೆ. ನಮ್ಮಲ್ಲಿ ಎಲ್ಲ ಶಾಸಕರು, ಕಾರ್ಯಕರ್ತರು ಎಲ್ಲರೂ ಸರಿಯಾಗಿ ಆರೋಗ್ಯಕರವಾಗಿದ್ದೇವೆ. ನಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯ ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ ಎಂದರು.
ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾವಾಗ ಮಾಡಬೇಕೆಂದು ಅವಾಗ ಮಾಡುತ್ತಾರೆ ಎಂದರು.ಪ್ರಕಾಶ್ ಹುಕ್ಕೇರಿ ಹಿರಿಯರಿದ್ದಾರೆ. ಅವರಿಗೆ ಸಿಎಂ ಸ್ಥಾನ ಸಿಗಬೇಕಿತ್ತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾಮರ್ಥ್ಯ ಬಹಳಷ್ಟು ಜನರಿಗೆ ಇರುತ್ತದೆ. ಸಿಎಂ ಆಗುವುದು ಒಬ್ಬರೇ ತಾನೆ ಎಂದರು.