ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧ ಬಳಿ ಡಿ. 10ರಂದು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ಚಳವಳಿಗೆ ವಿಜಯಾನಂದ ಕಾಶಪ್ಪನವರ ಅಪಸ್ವರ ಎತ್ತುತ್ತಿರುವುದು ಸರಿಯಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.
ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಪ್ರತಿಯೊಬ್ಬರ ಕರ್ತವ್ಯ: ಡಾ ಕುಮಾರ
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದ ಹಿತಕ್ಕಾಗಿ ಹೋರಾಟ ಮಾಡುವಾಗ ಪಕ್ಷ ಮರೆತು ಹೋರಾಡಬೇಕಾಗುತ್ತದೆ. ಸರ್ಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳಬಾರದು. ಈ ಹಿಂದೆ ನಾವು ಸಹ ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ಸಮಾಜಕ್ಕೆ ಮೀಸಲಾತಿಗಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದೆವು. ಮುಖ್ಯಮಂತ್ರಿಗೆ ಸಮಾಜದ ಮೀಸಲಾತಿ ವಿಷಯವಾಗಿ ಮನವರಿಕೆ ಮಾಡಿದ್ದೆವು. ಆದರೆ, ವಿಜಯಾನಂದ ಕಾಶಪ್ಪನವರ ಒಂದು ವೀರಶೈವ ಲಿಂಗಾಯತ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕಾಗಿ ಸರ್ಕಾರದ ಪರ ನಿಂತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ದೇಶದಲ್ಲಿ ಎಲ್ಲಾ ಸಮುದಾಯದವರಿಗೂ ಮತದಾನದ ಹಕ್ಕಿದೆ. ಅದನ್ನು ನಿರಾಕರಿಸಲಾಗದು ಎಂದು ಸ್ವಾಮೀಜಿಯೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದರು.