ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ನಟಿ ಪವಿತ್ರಾ ಗೌಡಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೇಲ್ ಸಿಕ್ಕ ಬೆನ್ನಲ್ಲೇ ಪವಿತ್ರಾ ಗೌಡ ಟೆಂಪಲ್ ರನ್ ಮಾಡಿದ್ದು ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಶಿರಡಿಗೆ ತೆರಳಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಓಂ ಶ್ರೀ ಸಾಯಿ ರಾಮ್ ಎಂದು ಎಂದು ಪವಿತ್ರಾ ಗೌಡ ಪೋಸ್ಟ್ ಹಾಕಿದ್ದಾರೆ.
ಹೊರರಾಜ್ಯಗಳ ದೇವಸ್ಥಾನದ ಭೇಟಿಗಾಗಿ ಪವಿತ್ರಾ ಗೌಡ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ನಿಂದ ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಟೆಂಪಲ್ ರನ್ ಮಾಡುತ್ತಿದ್ದಾರೆ.
ಜ.10 ರಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಪವಿತ್ರಾ ಪರ ವಕೀಲರು ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ನಟಿ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.