ಬೆಂಗಳೂರು:- 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PDO “ಲೋಕಾ” ಬಲೆಗೆ ಬಿದ್ದಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ.. FIR ದಾಖಲು..!
ದೊಡ್ಡಬಳ್ಳಾಪುರದ ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ.
ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ಪಿಡಿಒನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಆವರಣದಲ್ಲಿ ಅಧಿಕಾರಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಪಿಡಿಒರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.