ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ವಿಡಿಯೋ ದೌರ್ಜನ್ಯ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಸಹ ಪ್ರಜ್ವಲ್ ನ ವಿದೇಶದಿಂದ ಕರೆಸುವ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್ ರೇವಣ್ಣ ಈಗ ದುಬೈಗೆ ಶಿಫ್ಟ್ ಆಗಿದ್ದಾರೆ ಎನ್ನಲಾಗುತ್ತಿದೆ.ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಬುಧವಾರ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ವಿಶೇಷ ತನಿಖಾ ತಂಡದ ಬಳಿ ಮನವಿ ಮಾಡಿದ್ದರು. ಈಗ ಜರ್ಮನಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಬುಧವಾರ ರಾತ್ರಿ ದುಬೈಗೆ ಬಂದಿದ್ದಾರೆ. ದುಬೈಗೆ ಬಂದ ಹಿನ್ನೆಲೆಯಲ್ಲಿ ನೇರವಾಗಿ ಪ್ರಜ್ವಲ್ ರೇವಣ್ಣ ಶೀಘ್ರವೇ ಬೆಂಗಳೂರಿಗೆ ಬರುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್ಪೋರ್ಟ್ ರದ್ದುಪಡಿಸಬೇಕೆಂಬ ಆಗ್ರಹ ಕೇಳಿ ಬಂದಿದೆ.