ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದಲ್ಲಿ ಎಸ್ಐಟಿ (SIT) ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ (BJP) ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಜಮಖಂಡಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್ಐಟಿ ಏನು ಬೇಕಾದರೂ ಕ್ರಮಕೈಗೊಳ್ಳಲಿ ಎಂದಿದ್ದಾರೆ. ಬಿಜೆಪಿ ಏನಾದರು ಈ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿಯೇ? ಅಥವಾ ಪ್ರಕರಣದ ತನಿಖೆಗೆ ತಡೆಯೊಡ್ಡಲು ಯತ್ನಿಸಿಲ್ಲ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪದ ವಿಚಾರವಾಗಿ, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ವಿಚಾರ ಹೊರಬರಲಿದೆ ಎಂದು ಅವರು ಹೇಳಿದ್ದಾರೆ.