ಬೆಂಗಳೂರು: “ಪೆನ್ ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್ ಡಿಎ ನಿಲುವೇನು ಎಂದು ತಿಳಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಳಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ. ಆದರೆ ಈ ಹಗರಣದ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ತಮ್ಮ ನಿಲುವೇನು ಎಂಬುದರ ಬಗ್ಗೆ ಬಿಜೆಪಿ ಹಾಗೂ ಎನ್ ಡಿಎ ನಾಯಕರು ಉತ್ತರ ನೀಡಬೇಕು” ಎಂದರು.
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
ಪೆನ್ ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್.ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)