ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆ, ಕೊರೊನಾ ನಿಯಮ ಉಲ್ಲಂಘನೆ ಮಾಡಿದವರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ, ಅಂತರ ಕಾಪಾಡದವರಿಗೆ, ಕೊರೊನಾ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದವರಿಗೆ ದಂಡದ ಬಿಸಿ ಮುಟ್ಟಿದೆ. ನಿನ್ನೆ ಮಾಸ್ಕ್ ಧರಿಸದ 1,855 ಪ್ರಕರಣಗಳು ದಾಖಲು ಮಾಡಲಾಗಿದ್ದು, ₹4.63 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ಅಲ್ಲದೇ ಅಂತರ ಕಾಯ್ದುಕೊಳ್ಳದ ಹಿನ್ನೆಲೆ 19 ಪ್ರಕರಣ ದಾಖಲು ಮಾಡಲಾಗಿದ್ದು, 4,750 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಲಾಗಿದೆ. ಇನ್ನೂ ನೈಟ್ಕರ್ಫ್ಯೂ ಉಲ್ಲಂಘಿಸಿದ ಹಿನ್ನೆಲೆ ಬೆಂಗಳೂರು ನಗರದಲ್ಲಿ ನಿನ್ನೆ 829 ವಾಹನಗಳು ಸೀಜ್ ಆಗಿದ್ದು, 755 ದ್ವಿಚಕ್ರ ವಾಹನ, 25 ಆಟೋ, 49 ಕಾರುಗಳು ಜಪ್ತಿ ಮಾಡಲಾಗಿದೆ ಎಂದು ಹೇಳಲಾಗಿದೆ.
