ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು.
ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಒಳ್ಳೆಯ ಕೆಲಸಗಳನ್ನ ಮಾಡಲು ಪ್ರೇರಣೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರೈತರೇ ಗಮನಿಸಿ: ಮಿನಿ ಪವರ್ ಟಿಲ್ಲರ್ ಖರೀದಿಗೆ ಸರ್ಕಾರ ನೀಡುತ್ತಿದೆ ಶೇ.90ರಷ್ಟು ಸಹಾಯಧನ.! ಇಂದೇ ಅರ್ಜಿ ಸಲ್ಲಿಸಿ
ಸಂಡೂರ ಕಾಂಗ್ರೆಸ್ ಗೆದ್ದ ಕ್ಷೇತ್ರವಾಗಿತ್ತು. ಅಲ್ಲಿ ಗೆಲ್ಲುವ ವಿಶ್ವಾಸವಿತ್ತು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಹೆಚ್ಚಿನ ಬಲ ತುಂಬಲಿದೆ. ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಬಿಜೆಪಿಯ ಕೋಮು ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಮೊದಲಿನಿಂದಲು ಬೆಂಬಲವಿತ್ತು. ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಅವರನ್ನ ಕಣಕ್ಕಿಳಿಸಿದ್ದರು.
ರಾಜಕೀಯಕ್ಕಾಗಿ ದೇವೇಗೌಡರನ್ನ ಈ ಇಳಿ ವಯಸ್ಸಿನಲ್ಲಿ ಬೀದಿ ಬೀದಿ ಸುತ್ತಾಡಿಸಿದರು. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿ ರಾಜ್ಯದ ಪರ ಕೆಲಸ ಮಾಡುವ ಬದಲು, ಸುಳ್ಳಿನ ಪ್ರಚಾರ ನಡೆಸಿದರು. ಅದು ಫಲ ನೀಡಲಿಲ್ಲ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನ ತಡೆಯುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ಮುಂದೆ ಕೆಲಸ ಮಾಡಲಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.