ಬೆಂಗಳೂರು: 10 ಕೆ.ಜಿ ತೂಕ ಕಡಿಮೆ ಮಾಡಿಕೊಳ್ಳಲು ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ವ್ಯಂಗವಾಡಿದ್ದಾರೆ. ಈ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು 2013ರಿಂದ 2018ರವರೆಗೆ ಕಾಂಗ್ರೆಸ್ ಆಡಳಿತ ಹೊಣೆಗೇಡಿತನದಿಂದ ಕೂಡಿತ್ತು, ಕಾಂಗ್ರೆಸ್ ಸುಳ್ಳು ಹೇಳಿ ಮೋಸ ಮಾಡಿದ್ದು ಜನರಿಗೆ ಗೊತ್ತಿದೆ. ನಾಳೆ ಸುಪ್ರೀಂನಲ್ಲಿ ಮೇಕೆದಾಟು ಕೇಸ್ ಮುಗಿದ ಬಳಿಕ ಕಾಂಗ್ರೆಸ್ ಬಂಡವಾಳ ಬಯಲಾಗುತ್ತದೆ. ದಾಖಲೆ ಸಮೇತ ಸ್ಫೋಟಕ ಮಾಹಿತಿ ಹೊರಹಾಕುತ್ತೇನೆ ಎಂದು ಸಚಿವ ಗೋವಿಂದ ಕಾರಜೋಳ ಸವಾಲು ಹಾಕಿದ್ದಾರೆ.
