ಹುಬ್ಬಳ್ಳಿ: ಕೊವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಬೇರೆ ರಾಜ್ಯಕ್ಕೆ ಹೋಲಿಸಿದ್ರೆ ಕರ್ನಾಟಕದಲ್ಲಿ ಟೆಸ್ಟಿಂಗ್ ಹೆಚ್ಚಿಸಿದ್ದೇವೆ.
ಸಹಜವಾಗಿ ಕೊರೊನಾ ಕೇಸ್ ಸ್ವಲ್ಪ ಜಾಸ್ತಿ ಆಗಿದೆ. ರಾಜ್ಯದಲ್ಲಿ ಸುಮಾರು 7 ಸಾವಿರ ಕೊವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದರು.