ಬೆಂಗಳೂರು:- ಸಂವಿಧಾನವನ್ನೇ ಕಿತ್ತು ಹಾಕುತ್ತೇವೆ ಎಂದವರನ್ನ ಜನತೆ ಕಿತ್ತಾಕಿದರು ಎಂದು ಹೇಳುವ ಮೂಲಕ ಬಿಜೆಪಿಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.
ಅಂಗಡಿಯಿಂದ ತಂದ ಪ್ಯಾಕೆಟ್ ಹಾಲನ್ನು ಬಿಸಿ ಮಾಡೋ ಅಭ್ಯಾಸ ಇದ್ಯಾ!? ನೋಡಿ ಈ ಮಿಸ್ಟೇಕ್ ಬೇಡ ಅಂತಾರೆ ತಜ್ಞರು!
ಈ ಸಂಬಂಧ ಮಾತನಾಡಿದ ಅವರು, ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿಯವರನ್ನೇ ಜನರು ಬದಲಾಯಿಸಿದರು ಎಂದರು.
ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ ಪ್ರಧಾನ ಮಂತ್ರಿಗಳು ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ತೆಗೆದುಕೊಳ್ಳುವಂತಹ ಸಂದರ್ಭ ಸೃಷ್ಟಿಯಾಯಿತು. ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಇತಿಹಾಸ ಎಂದರು.
ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ, ಮಾರಾಟ ಮಾತ್ರ ಆಗಬೇಡ ಎನ್ನುವ ಕಿವಿಮಾತನ್ನು ರಾಜಕಾರಣಿಗಳಿಗೆ ಅಂಬೇಡ್ಕರ್ ಅವರು ಹೇಳಿದ್ದಾರೆ. ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದ ಕಾರಣ ಪ್ರತಿಯೊಬ್ಬರು ಇತಿಹಾಸದಿಂದ ಪಾಠ ಕಲಿಯಬೇಕು ಎನ್ನುವ ಸಂದೇಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ ಎಂದು ಹೇಳಿದರು.